ಬೆಂಗಳೂರು: ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ, ಕಲಾವಿದೆ ಹಂಸ ಮೊಯ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಅವರು ಕೊನೆಯುಸೆರೆಳೆದಿದ್ದಾರೆ.
46 ವರ್ಷ ಹರೆಯದ ಹಂಸ ಮೊಯ್ಲಿ ಭರತನಾಟ್ಯ ಕಲಾವಿದೆಯಾಗಿದ್ದರು. ನೃತ್ಯ ಸಂಯೋಜಕಿಯಾಗಿಯೂ ಜನಪ್ರಿಯರಾಗಿದ್ದರು.. ತಮಿಳು ಸಿನಿಮಾವೊಂದರಲ್ಲೂ ನಟಿಸಿದ್ದರು. ದೇವದಾಸಿಯರ ಜೀವನಾಧಾರಿತ ತಮಿಳು ಚಿತ್ರ ‘ಶೃಂಗಾರಂ’ನಲ್ಲಿ ಅವರ ಅಭಿನಯ ಗಮನಸೆಳೆದಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಗಣ್ಯರ ಕಂಬನಿ:
ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿ ಅವರು ಅಕಾಲಿಕವಾಗಿ ವಿಧಿವಶರಾದ ಸುದ್ದಿ ಅತೀವ ನೋವು ಉಂಟುಮಾಡಿದೆ ಎಂದು ಬಿಜೆಪಿ ನಾಯಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದುಃಖ ಹಂಚಿಕೊಂಡಿದ್ದಾರೆ. ಸಮಾಜ ಸೇವಕಿ, ಭರತನಾಟ್ಯ ಕಲಾವಿದೆಯಾಗಿದ್ದ ಆಕೆಯ ಅಗಲಿಕೆ, ಹೆತ್ತವರಿಗೆ, ಕುಟುಂಬ ಸದಸ್ಯರಿಗೆ ಅದೆಷ್ಟು ನೋವನ್ನು ತಂದಿದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ದೇವರು ಅಗಲಿದ ಚೇತನಕ್ಕೆ ಸದ್ಗತಿ ನೀಡಲಿ, ಕುಟುಂಬ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಬಿಎಸ್‌ವೈ ಪ್ರಾರ್ಥಿಸಿದ್ದಾರೆ.
ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಶ್ರೀ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿ ಅವರು ಅಕಾಲಿಕವಾಗಿ ವಿಧಿವಶರಾದ ಸುದ್ದಿ ಅತೀವ ದುಃಖವನ್ನು ಉಂಟುಮಾಡಿದೆ. ಸಮಾಜ ಸೇವಕಿ, ಭರತನಾಟ್ಯ ಕಲಾವಿದೆಯಾಗಿದ್ದ ಆಕೆಯ ಅಗಲಿಕೆ, ಹೆತ್ತವರಿಗೆ, ಕುಟುಂಬ ಸದಸ್ಯರಿಗೆ ಅದೆಷ್ಟು ನೋವನ್ನು ತಂದಿದೆ ಎನ್ನುವುದನ್ನು…
— B.S.Yediyurappa (@BSYBJP) June 30, 2024