ರಾಯಚೂರು: ಕೈಂಕರ್ಯಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಪಿಕಪ್ ವಾಹನ ಹರಿದು ಮೂವರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಹನುಮ ಜಯಂತಿ ಪ್ರಯುಕ್ತ ಮಡಿ ನೀರು ತರಲು ಕೃಷ್ಣಾ ನದಿಗೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರ ಮೇಲೆ ವಾಹನ ಹರಿದು ಘೋರ ಅಪಘಾತ ಸಂಭವಿಸಿದೆ. ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೈಸೂರು ಪೆಟ್ರೊ ಕೆಮಿಕಲ್ ಹತ್ತಿರ ಮಂಗಳವಾರ ಬೆಳಗಿನ ಜಾವ ಈ ಅವಘಡ ಸಂಭವಿಸಿದೆ. .
ಮೃತರನ್ನು ಅಯ್ಯನಗೌಡ, ಮಹೇಶ, ಉದಯಕುಮಾರ್ ಎಂದು ಗುರುತಿಸಲಾಗಿದೆ. ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಶಕ್ತಿನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


























































