ಬೆಂಗಳೂರು: ನಾಡಿನ ಖ್ಯಾತ ಸಂಶೋಧಕ, ನಿಘಂಟು ತಜ್ಞ ಫ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು. ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದದ್ದು ಎಂದು ಕುಮಾರಸ್ವಾಮಿ ಸ್ಮರಿಸಿದ್ದಾರೆ
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು. ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದದ್ದು.
2/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 19, 2021
ನಾಡು-ನುಡಿಯ ಶ್ರೇಷ್ಠ ವಿದ್ವಾಂಸಕನನ್ನು ರಾಜ್ಯ ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಹೆಚ್‌ಡಿಕೆ ಪ್ರಾರ್ಥಿಸಿದ್ದಾರೆ.