ನವದೆಹಲಿ: ಮುಖ್ಯಮಂತ್ರಿ ಬದಲಾವಣೆ ಸಂಬಂಧ ಪ್ರದೇಶ ಕಾಂಗ್ರೆಸ್ ಪಾಳಯದಲ್ಲಿ ಬಿರುಸಿನ ಕಾದಾಟ ನಡೆಯುತ್ತಿರುವಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಕುತೂಹಲಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದ್ದಾರೆ.
ಆದರೆ, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಅಭಿನಂಧಿಸುವ ಸಲುವಾಗಿ ಭೇಟಿಯಾಗಿರುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ.
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರನ್ನು ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂಧಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.
ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು.ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದವರು ತಿಳಿಸಿದ್ದಾರೆ.
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಮಾನ್ಯ @AmitShah ಜೀ ಅವರನ್ನು ಇಂದು ಭೇಟಿ ಮಾಡಿ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.
ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ… pic.twitter.com/kMlRkeqg6Q
— Vijayendra Yediyurappa (@BYVijayendra) November 23, 2025






















































