ಬೆಂಗಳೂರು: ರಾಜ್ಯ ರಾಜಕಾರಣ ಇದೀಗ ಮತ್ತೆ ಜಾತಿ ಗಣತಿ ಜಟಾಪಟಿಗೆ ಸಾಕ್ಷಿಯಾಗುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಡೆಯನ್ನು ಪ್ರತಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ.
ಇಂಗ್ಲಿಷ್ ಆವೃತ್ತಿಯಲ್ಲೂ
![]()
K’taka-led Cong govt raising caste census to hide lapses in B’luru stampede: BJP
ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ.
ಬೆಂಗಳೂರಿನ ದುರಂತದ ಕಾಲ್ತುಳಿತದ 11 ಅಮಾಯಕರ ಸಾವುಗಳಿಗೆ ರಾಜ್ಯವಷ್ಟೇ ಅಲ್ಲ ದೇಶವೇ… https://t.co/ym4xJMrHB2
— Vijayendra Yediyurappa (@BYVijayendra) June 10, 2025
ಬೆಂಗಳೂರಿನ ದುರಂತದ ಕಾಲ್ತುಳಿತದ 11 ಅಮಾಯಕರ ಸಾವುಗಳಿಗೆ ರಾಜ್ಯವಷ್ಟೇ ಅಲ್ಲ ದೇಶವೇ ಮಮ್ಮಲ ಮರುಗುತ್ತಿದೆ. ಆದರೆ ಪ್ರಚಾರದ ಗೀಳಿಗೆ ಇಳಿದು ದೇಶದ ಜನಸಾಮಾನ್ಯರ ಆಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರ ಜನಗಣತಿಯನ್ನು ಪುನಃ ಪ್ರಸ್ತಾಪಿಸುವ ಮೂಲಕ ತನ್ನ ಹುಳುಕು ಮುಚ್ಚಿಕೊಳ್ಳಲು ಹೊರಟಿರುವುದು ನಿಜಕ್ಕೂ ದುರ್ದೈವದ ಸಂಗತಿ ಎಂದು ವಿಜಯೇಂದ್ರ ಹೇಳಿದ್ದಾರೆ.
ಮರು ಜಾತಿಗಣತಿ ಮಾಡಲು ಹೊರಟಿರುವ ರಾಜ್ಯ ಸರ್ಕಾರ ಈಗಾಗಲೇ ಜಾತಿಗಣತಿಗಾಗಿ ಖರ್ಚು ಮಾಡಿರುವ 160 ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಪೂರ್ಣ ವ್ಯರ್ಥ ಎಂದು ಒಪ್ಪಿಕೊಳ್ಳುತ್ತಿದ್ದಾರೆಯೇ? ಎಂದು ಪ್ರಶ್ನಿಸಿರುವ ವಿಜಯೇಂದ್ರ, ಉಪಮುಖ್ಯಮಂತ್ರಿಗಳ ಹೇಳಿಕೆಯಿಂದ ಈ ಸಂಗತಿ ಬಹಿರಂಗವಾದಂತಿದೆ. ಕಾಂಗ್ರೆಸ್ ಸರ್ಕಾರದ ಈ ಕುಟಿಲ ಬುದ್ದಿ, ಬೇಜವಾಬ್ದಾರಿತನ ಹಾಗೂ ಜನ ಪೀಡಕ ನಿಲುವುಗಳಿಗೆ ಜನರು ತಕ್ಕಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಎಂದು ಬರೆದುಕೊಂಡಿದ್ದಾರೆ.