ಬೆಂಗಳೂರು: ಭಾರತೀಯ ಜನತಾ ಪಕ್ಷದ ಬಲವರ್ಧನೆ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಆಡಳಿತವನ್ನು ಮೆಚ್ಚಿಕೊಂಡು ರಾಜ್ಯದಲ್ಲೂ 15ರಿಂದ 20 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಉತ್ಸಾಹ ತೋರುತ್ತಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.
ವಿಜಯಪುರದ ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಬುಧವಾರ ಬಿಜೆಪಿ ರಾಜ್ಯ ಪ್ರಕೋಷ್ಠಗಳ ಸಭೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲೂ ಅಸಮಾಧಾನ ಹೊಂದಿದ ಶಾಸಕರಿದ್ದಾರೆ. ಆದರೆ, ನಮಗೆ ಅವರ ಅವಶ್ಯಕತೆ ಇಲ್ಲ ಎಂದರು.
ಮೂರು ವಿಧಾನಸಭಾ ಚುನಾವಣೆ ಮತ್ತು ಒಂದು ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸುವುದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟ್‍ನ ಆಧಾರದಲ್ಲಿ ರಚಿಸಿದ ಟ್ರಸ್ಟ್ ಶ್ರೀರಾಮ ಮಂದಿರ ನಿರ್ಮಿಸುತ್ತಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಅವರು ತಿಳಿಸಿದರು.