ಧಾರವಾಡ : ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಬಿಐ ಅಧಿಕಾರಿಗಳು ಇಂದು ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದರು.
ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಸಿಬಿಐ ತಂಡ ಇಂದು ಬೆಳ್ಳಂಬೆಳಿಗ್ಗೆ ವಶಕ್ಕೆ ಪಡೆದಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಮಾಜಿ ಆಪ್ತ ಸಹಾಯಕರಾಗಿರುವ ಸೋಮು ನ್ಯಾಮಗೌಡ ಅವರ ಈ ಬಂಧನ ಈ ಪ್ರಕರಣಕ್ಕೆ ಮತ್ತಷ್ಟು ರೋಚಕತೆ ತುಂಬಿದೆ.
ವಿನಯ ಕುಲಕರ್ಣಿ ಅವರು ಸಚಿವರಾಗಿದ್ದಾಗ ಆಪ್ತ ಸಹಾಯಕರಾಗಿದ್ದ ಸೋಮು ಅವರನ್ನು ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಈಗಾಗಲೇ 10 ಕ್ಕೂ ಹೆಚ್ಚು ಬಾರಿ ವಿಚಾರಣೆ ಎದುರಿಸಿದ್ದರೆನ್ನಲಾಗಿದೆ.
ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಸೋಮು ನ್ಯಾಮಗೌಡ ಅವರನ್ನು ವಶಕ್ಕೆ ಪಡೆದುಕೊಂಡು ಮತ್ತೆ ಕಾನೂನು ಪ್ರಕ್ರಿಯೆ ಅನುಸರಿಸಿದ್ದಾರೆ ಎನ್ನಲಾಗಿದೆ.