ಬೆಂಗಳೂರು: ಮತದಾರರ ಪಟ್ಟಿ ಗೋಲ್‌ಮಾಲ್ ಪ್ರಕರಣವು ಇದೀಗ ರಾಜ್ಯ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಿನ ಜಂಗೀಕುಸ್ತಿಗೆ ಕಾರಣವಾಗಿದೆ. ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಕಾಂಗ್ರೆಸ್ ಆಗ್ರಹಿಸುತ್ತಿದ್ದರೆ, ಇನ್ನೊಂದೆಡೆ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ಸಂಬಂಧ 2013ರಿಂದಲೇ ತನಿಖೆಯಾಗಬೇಕು ಎಂದು ಬಿಜೆಪಿ ಹೇಳಿದೆ.
ಈ ನಡುವೆ, ಮತದಾರರ ಪಟ್ಟಿ ಕುರಿತು 2013ರಿಂದಲೇ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆಗೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, 2013ರಿಂದಲೂ ಚಿಲುಮೆ ಸಂಸ್ಥೆಗೆ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಇತರ ಜವಾಬ್ದಾರಿಗಳನ್ನು ವಹಿಸಿದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದೇನೆ. ನಿರಾಧಾರ ಆರೋಪ ಮಾಡುತ್ತಿರುವ ಕಾಂಗ್ರೆಸ್ ನ ಈ ಪ್ರಯತ್ನ, ಮುಂದಿನ ದಿನಗಳಲ್ಲಿ ಅವರಿಗೆ ತಿರುಗುಬಾಣವಾಗಲಿದೆ ಎಂದಿದ್ದಾರೆ.
2013ರಿಂದಲೂ ಚಿಲುಮೆ ಸಂಸ್ಥೆಗೆ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಇತರ ಜವಾಬ್ದಾರಿಗಳನ್ನು ವಹಿಸಿದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದೇನೆ. ನಿರಾಧಾರ ಆರೋಪ ಮಾಡುತ್ತಿರುವ ಕಾಂಗ್ರೆಸ್ ನ ಈ ಪ್ರಯತ್ನ, ಮುಂದಿನ ದಿನಗಳಲ್ಲಿ ಅವರಿಗೆ ತಿರುಗುಬಾಣವಾಗಲಿದೆ.@BJP4Karnataka pic.twitter.com/IiuodOF3jx
— Basavaraj S Bommai (Modi Ka Parivar) (@BSBommai) November 20, 2022





















































