ಬೆಂಗಳೂರು: ಮತದಾರರ ಪಟ್ಟಿ ಗೋಲ್ಮಾಲ್ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಪಟ್ಟಹಿಡಿದಿದೆ.
ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು ಎಂದವರು ಒತ್ತಾಯಿಸಿದ್ದಾರೆ.
ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು ಎಂದವರು ಪ್ರತಿಪಾದಿಸಿದ್ದಾರೆ.
ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು.
ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು.
ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು.
– @siddaramaiah pic.twitter.com/GO3XqAmrUl— Karnataka Congress (@INCKarnataka) November 26, 2022





















































