ಬೆಂಗಳೂರು: ರಾಜ್ಯದ ಎಲ್ಲಾ ಅರ್ಹರಿಗೂ ಲಸಿಕೆ ಹಾಕುವ ಮೂಲಕ ರಾಜ್ಯದ ಜನರನ್ನು ಕಾಪಾಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ರಾಜಕೀಯ ಮಾಡದೆ ಜನರ ಪ್ರಾಣ ರಕ್ಣಣೆಯ ಕ್ರಮಕ್ಕೆ ಮುಂದಾಗಬೇಕೆಂದು ಸಲಹೆ ಮಾಡಿದ್ದಾರೆ.
ಕೆಲವು ತಿಂಗಳಲ್ಲಿ ಮೂರನೇ ಅಲೆ ಪ್ರಾರಂಭವಾಗುತ್ತದೆಂದು ತಜ್ಞರು ಹೇಳುತ್ತಿದ್ದಾರೆ. ಹಾಗಾಗಿ ಒಂದೆರಡು ತಿಂಗಳಲ್ಲಿ ಸಂಪೂರ್ಣ ಲಸಿಕೆ ಹಾಕಿಸಿ ಮುಗಿಸಬೇಕು ಎಂದು ಸಲಹೆ ಮಾಡಿರುವ ಸಿದ್ದರಾಮಯ್ಯ, ಲಸಿಕೆಗಳನ್ನು ಕೇಂದ್ರದಿಂದಾದರೂ ಅಥವಾ ರಾಜ್ಯದಲ್ಲೇ ಉತ್ಪಾದಿಸಿ ಜನರಿಗೆ ಬೀಡಬೇಕು ಎಂದು ಆಗ್ರಹಿಸಿದ್ದಾರೆ.




































































