ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರಿನಲ್ಲಿಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಯು.ಟಿ.ಖಾದರ್, ಮಾಜಿ ಸಚಿವರಾದ ರಮನಾಥ ರೈ, ಅಭಯಚಂದ್ರ ಜೈನ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಐವನ್ ಡಿಸೋಜಾ ಮೊದಲಾದ ಮುಖಂಡರು ಉಪಸ್ಥಿತರಿದ್ದರು