ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಸರ್ಕಾರ ಇಂದು ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಬುಧವಾರ ಬೆಳಿಗ್ಗೆ ಕೋಲ್ಕತ್ತಾದ ರಾಜ ಭವನದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಆ ರಾಜ್ಯದಲ್ಲಿ ಮೂರನೇ ಬಾರಿಗೆ ಸಿಎಂ ಆಗಿ ಪದಗ್ರಹಣ ಮಾಡಿದಂತಾಗಿದೆ. ರಾಜ್ಯಪಾಲ ಜಗದೀಪ್ ಧನಕರ್ ಅವರು ಮಮತಾ ಬ್ಯಾನರ್ಜಿಯವರಿಗೆ ಪ್ರತಿಜ್ಞಾವಿಧಿ ಭೋಧಿಸಿದರು.
ಕೋವಿಡ್ -19 ಸೋಂಕು ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ಕಠಿಣ ನಿಯಮ ಜಾರಿಯಲ್ಲಿ ಇರುವುದರಿಂದ ಈ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮವನ್ನು ಸರಳವಾಗಿ ನಡೆಸಲಾಗಿದೆ.