ದೆಹಲಿ: ಕರ್ನಾಟಕ ರಾಜ್ಯದ ಹಲವು ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚಿಸಲಿದ್ದಾರೆ.
ಆ ಸಭೆಗೂ ಮುನ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜಲಸಂಪನ್ಮೂಲ ಸಚಿವರೊಂದಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್ ಕುಮಾರ್ ಸೇರಿದಂತೆ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.