ಬೆಂಗಳೂರು: ವಿದ್ಯುನ್ಮಾನ ಮತಯಂತ್ರ ಬಗ್ಗೆ ನಮಗೂ ಅನುಮಾನವಿದೆ ಎಂದಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತಂತೆ ಕಾಂಗ್ರೆಸ್ ನಾಯಕರ ಹೇಳಿಕೆ ಬಗ್ಗೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಶೋಕ್ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ನಾಯಕರಂತೆಯೇ ಇವಿಎಂ ಮೇಲೆ ನಮಗೂ ಅನುಮಾನವಿದೆ. ಆದ್ದರಿಂದ ಕಾಂಗ್ರೆಸ್‌ನ ಎಲ್ಲ ಶಾಸಕರು ರಾಜೀನಾಮೆ ನೀಡಲಿ. ನಂತರ ಒಂದಾಗಿ ಚುನಾವಣೆ ಎದುರಿಸಬಹುದು ಎಂದವರು ವ್ಯಂಗ್ಯವಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಯಾಕೆ ಸೋತಿದ್ದೇವೆ ಎಂದು ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ. ಅದು ಬಿಟ್ಟು ಇವಿಎಂ ಮೇಲೆ ಆರೋಪ ಮಾಡುವುದಲ್ಲ ಎಂದವರು ಪ್ರತಿಪಾಯ.