ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದಾಗಿ ಮತ್ತೆ ಕಠಿಣಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ಸರ್ಕಾರ, ಕೇರಳ ಹಾಗೂ ಮಹಾರಾಷ್ಟ್ರ ಗಡಿಗೆ ಜಿಲ್ಲೆಗಳಲ್ಲಿ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಘೋಷಿಸಿದೆ.
ದಕ್ಷಿಣ ಕನ್ನಡಲ್ಲೂ ಈ ಕಠಿಣ ನಿಯಮ ಜಾರಿಯಲ್ಲಿದೆ. ಆದರೆ ಶನಿವಾರ ಮಾತು ಭಾನುವಾರ ಖಾಸಗಿ ಬಸ್ಸುಗಳ ಸಂಚಾರ ಇರಲಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಖಾಸಗಿ ಬಸ್ಸುಗಳೇ ಜನರಿಗೆ ಆಧಾರ. ಹಾಗಾಗಿ ಕೇರಳಕ್ಕೆ ಗಡಿಗೆ ಹೊಂದಿಕೊಂಡಿದ್ದರೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ ಎಂದು ಕೆನರಾ ಬಸ್ಸು ಮಾಲಕರ ಸಂಘದ ಮೂಲಗಳು ತಿಳಿಸಿವೆ. ಆದರೆ ಸಿಟಿ ಬಸ್ಸುಗಳ ಓಡಾಟ ಅನಿಶಿತ ಎಂದು ಹೇಳಲಾಗುತ್ತಿದೆ.
ಇನ್ನೂ ಏನೇನಿರುತ್ತೆ..?
ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹಾಗೂ ಮಹಾರಾಷ್ಟ್ರ ಗಡಿ ಸಮೀಪದ ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಆರಂಭ ಆಗಿದೆ. ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ. ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುವ ಕಡೆ ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಅವಕಾಶ ಇದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2ರವರೆಗೆ ಅವಕಾಶ ಇದೆ. ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್ಗೆ ಮಾತ್ರ ಅವಕಾಶ. ಹೋಮ್ ಡೆಲಿವರಿಗೆ ದಿನದ 24 ಗಂಟೆಯೂ ಅವಕಾಶ ಇರಲಿದೆ.