ಮಂಗಳೂರು: ಬಂದರು ನಗರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಇಂದು ಬೆಚ್ಚಿಬೀಳುವ ಘಟನೆ ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಅವಾಂತರ ಸೃಷ್ಟಿಸಿದ್ದಾನೆ.
ಸುಮಾರು 30 ವರ್ಷ ವಯಸ್ಸಿನ ವ್ಯಕ್ತಿಯ ಅವಾಂತರದಿಂದಾಗಿ ಆಸ್ಪತ್ರೆಯಲ್ಲಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಚ್ಚಿ ಬಿದ್ದಿದ್ದಾರೆ. ಈ ಸುದ್ದಿ ಪೊಲೀಸರಿಗೂ ತಲುಪಿ ಖಾಕಿ ತಂಡ ಸ್ಥಳಕ್ಕೆ ಧಾವಿಸಿಬಂತು. ಅದೃಷ್ಟವಶಾತ್ ಆತನಿಗೆ ಯಾವುದೇ ಪ್ರಾಣಪಾಯವಾಗಿಲ್ಲ.
ಆಸ್ಪತ್ರೆಯ ಎರಡನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾನೆ. ಸೋಂಕಿತ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಇದೀಗ ಆತನಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.