ಕೋಲ್ಕತಾ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ನಾಳೆ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಸೋಮವಾರ ನಡೆದ ತೃಣಮೂಲ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಮಂಗಳವಾರ ರಾಜ್ಯಪಾಲರನ್ನು ಭೇಟಿಯಾಗಿ ತೃಣಮೂಲ ಕಾಂಗ್ರೆಸ್ ನಿಯೋಗವು ಸರ್ಕಾರ ರಚನೆ ಸಂಬಂಧ ಹಕ್ಕು ಮಂಡಿಸಲಿದೆ.
ಈ ನಡುವೆ, ಮಮತಾ ಬ್ಯಾನರ್ಜಿ ಅವರು ಸತತ ಮೂರನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.