ಬೆಂಗಳೂರು: ಕೇಂದ್ರದ ಬಜೆಟ್ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ವಿಶ್ಲೇಷಿಸಿದ್ದಾರೆ.
ಇಂಗ್ಲಿಷ್’ನಲ್ಲೂ ಉದಯ ನ್ಯೂಸ್ ಲಭ್ಯ..
Siddaramaiah’s criticism of Budget 2025 purely politically motivated: K’taka BJP
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಪದ್ಮರಾಜ್ ಆರ್. ಪೂಜಾರಿ, ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರೆ. ಅದು ಘೋಷಣೆಯಾಗಿ ಮಾತ್ರ ಉಳಿದಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ ಎಂದಿದ್ದಾರೆ.
12 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ ಮತ್ತು ಕೆಲವೊಂದು ತೆರಿಗೆ ವಿನಾಯಿತಿ ಮಾಡಿರುವುದು ಮಾತ್ರ ಸ್ವಾಗತಾರ್ಹ. ಆದರೇ, ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಆಯವ್ಯಯ ಎಂದು ಬಣ್ಣಿಸಿದ ಪದ್ಮರಾಜ್, ಕಳೆದ 10 ವರ್ಷಗಳಿಂದಲೂ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಬಡವರು, ರೈತರು, ಯುವಕರು, ಮಹಿಳೆಯರ ಬಾಳು ಹಸನಾಗಿಸುವ ಮಹತ್ವದ ಯಾವುದೇ ಯೋಜನೆಗಳಲ್ಲಿಲ್ಲ ಎಂದು ವಿಶ್ಲೇಷಣೆ ಮಾಡಿದ್ದಾರೆ.
ನಮ್ಮಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಇಲ್ಲಿನ ಸಂಸದರು ಸಚಿವರ ಮೇಲೆ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಅವರು ಆಯ್ಕೆಯಾಗಿದ್ದರೂ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಪದ್ಮರಾಜ್ ಆರ್. ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.