ಲಂಡನ್: ಜಗತ್ತಿನ ಕ್ರೀಡಾ ಕ್ಷೇತ್ರಗಳಲ್ಲಿ ಕುತೂಹಲದ ಕೇಂದ್ರಬಿಂದುವಾಗಿದ್ದ ವಿಂಬಲ್ಡನ್ ಸೆಣಸಾಟದಲ್ಲಿ ಜೆಕ್ ಗಣರಾಜ್ಯದ ಮಾರ್ಕೆಟಾ ವೊಂಡ್ರೊಸೊವಾ ಅವರು ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಗ್ರ್ಯಾನ್ ಸ್ಲ್ಯಾಮ್ ಗೆದ್ದ ಮೊದಲ ಶ್ರೇಯಾಂಕ ರಹಿತ ಆಟಗಾರ್ತಿಯಾಗಿದ್ದಾರೆ.
ಅಂತಿಮ ಸೆಣಸಾಟದಲ್ಲಿ ಮಾರ್ಕೆಟಾ ವೊಂಡ್ರೊಸೊವಾ ಅವರು ಟ್ಯುನಿಷಿಯಾದ ಓನ್ಸ್ ಜಬೇರ್ ಅವರನ್ನು ಸೋಲಿಸಿ ಪ್ರತಿಷ್ಠಿತ ವಿಂಬಲ್ಡನ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.
15 July 2023 🗓️
The day unseeded Marketa Vondrousova was crowned #Wimbledon champion. pic.twitter.com/Ut3SLlkJag
— Wimbledon (@Wimbledon) July 15, 2023
2022 ರಲ್ಲಿ ಮಾರ್ಕೆಟಾ ವೊಂಡ್ರೊಸೊವಾ 99 ನೇ ಶ್ರೇಯಾಂಕವನ್ನು ಹೊಂದಿದ್ದರು.ಈ ಬಾರಿ ಅವರು ಚಾಂಪಿಯನ್ ಆಗಿ ಜಗತ್ತಿನ ಗಮನ ಕೇಂದ್ರೀಕರಿಸಿದ್ದಾರೆ.