ಹೊನ್ನಾವರ: ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರು ಪ್ರಯಾಣಿಸುತ್ತಿದ್ದ ವಾಹನ ಅಪಘಾತವಾಗಿದೆ. ಈ ಅಪಘಾತದಲ್ಲಿ ಚಿಟ್ಟಾಣಿಯವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊನ್ನಾವರ ತಾಲೂಕಿನ ಹಡಿಬಾಳದ ಸಮೀಪ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಈ ದುರ್ಘಟನೆಯಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖ್ಯಾತ ಯಕ್ಷಗಾನ ಕಲಾವಿದ, ಪದ್ಮಶ್ರೀ ಪುರಸ್ಕೃತ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುತ್ರ ಸುಬ್ರಹ್ಮಣ್ಯ ಚಿಟ್ಟಾಣಿಯವರು ತಮ್ಮ ತಂದೆಯವರ ಹಾದಿಯಲ್ಲೇ ನಡೆದು, ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದರು.
ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಸುಬ್ರಹ್ಮಣ್ಯ ಚಿಟ್ಟಾಣಿಯವರನ್ನು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.