ಗದಗ: ನಟ ಯಶ್ ಹುಟ್ಟು ಹಬ್ಬದ ಪ್ರಯುಕ್ತ ಕಟೌಟ್ ಹಾಕುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪಿರುವ ಯುವಕರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಸರ್ಕಾರ ಪ್ರಕಟಿಸಿದೆ.
ಗದಗ್ ಜಿಲ್ಲೆ ಲಕ್ಷ್ಮೀಶ್ವರ ಸಮೀಪ ಭಾನುವಾರ ರಾತ್ರಿ ಯಶ್ ಹುಟ್ಟು ಹಬ್ಬದ ಪ್ರಯುಕ್ತ ಯುವಕರ ಗುಂಪು ಕಟೌಟ್ ಹಾಕುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಮೃತಪಟ್ಟಿದ್ದರು. ನಾಲ್ವರು ಗಾಯಗೊಂಡಿದ್ದರು. ಈ ಘಟನೆ ಬಗ್ಗೆ ಮರುಗಿರುವ ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳ ಬಗ್ಗೆಯೂ ಅನುಕಂಪ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಮೃತರ ಕುಟುಂಬದವರಿಗೆ ಸರ್ಕಾರದ ವತಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.