ದೆಹಲಿ: ಸಚಿವ ನಿರಾಣಿ ಹಾಗೂ ಶಾಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಜಗಳ ಬಿಜೆಪಿ ನಾಯಕರಿಗೆ ಸವಾಲೆಂಬಂತಾಗಿದೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪಕ್ಷದ ನಾಯಕರ ಬೀದಿ ರಂಪಾಟ ತಡೆಯಲು ಮುಖಂಡರು ಹರಸಾಹಸ ನಡೆಸಿದ್ದಾರೆ.
ಈ ನಡುವೆ, ರಾಷ್ಟ್ರೀಯ ಕಾರ್ಯಕಾರಿಣಿ ಮುಗಿದ ನಂತರ ಯತ್ನಾಳ್ ಹೇಳಿಕೆ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು, ಈಗಾಗಲೇ ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇವೆ . ಕಾರ್ಯಕಾರಿಣಿ ಮುಗಿದ ಬಳಿಕ ಈ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.













































































