ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನ ಅಂಗವಾಗಿ ದೇಶದೆಲ್ಲೆಡೆ ಶುಕ್ರವಾರ ವಿವಿಧ ಕಾರ್ಯಕ್ರಮಗಳು ನೆರವೇರಿದವು. ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಮೋದಿ, ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವೂ ಆಗಿದೆ ಎಂದು ಪ್ರತಿಪಾದಿಸಿದರು. ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವೆನಿಸಿದಾಗ ಅದಕ್ಕೆ ಪರಿಹಾರ ಯೋಗದಲ್ಲಿದೆ ಎಂದ ಮೋದಿ ಇಂದು ಜಗತ್ತಿನಲ್ಲಿ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
As we mark the 10th International Day of Yoga, I urge everyone to make it a part of their daily lives. Yoga fosters strength, good health and wellness. Wonderful to join this year’s programme in Srinagar. https://t.co/oYonWze6QU
— Narendra Modi (@narendramodi) June 21, 2024
ಯೋಗಾಸನದಿಂದ ಮಾನಸಿಕ-ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗುತ್ತಿರುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದ ಅವರು. ಅಮೆರಿಕದ ಪ್ರಧಾನ ಕಚೇರಿಯಲ್ಲಿ ಕಳೆದ ವರ್ಷ 130ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಯೋಗ ದಿನಾಚರಣೆಗೆ ಮನ್ನಣೆ ಸಿಕ್ಕಿತು. ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ ಎಂದರು.