ಬೆಂಗಳೂರು: ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮ ಬೆಂಬಲಿಗರು ಹಾಗೂ ಸಚಿವ ಯೋಗೇಶ್ವರ್ ಆಪ್ತ ನಾಯಕರ ಹೇಳಿಕೆಗಳ ಜಟಾಪಟಿ ತೀವ್ರ ಗೊಡಿದೆ. ಹೆಚ್ಟಿಕೆ ಬಗ್ಗೆ ಟೀಕಿಸಿರುವ ಯೋಗೇಶ್ವರ್ ವಿರುದ್ದ ಜೆಡಿಎಸ್ ನಾಯಕರುಬತಮ್ಮದೇ ದಾಟಿಯಲ್ಲಿ ತಿರುಗೇಟು ನೀಡುತ್ತಿದ್ದಾರೆ. ಅದರಲ್ಲೂ ಜೆಡಿಎಸ್ ಶಾಸಕ ಸಾ.ರ.ಮಹೇಶ್ ಅವರು ಸಚಿವ ಯೋಗೇಶ್ವರ್ ಅವರನ್ನು ಚುನಾವಣೆಯಲ್ಲಿ ಸೋತಿರುವ ‘ಸರ್ವಪಕ್ಷ ಸದಸ್ಯ’ ಎಂದು ಗೇಲಿ ಮಾಡಿದ್ದಾರೆ.
ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿರುವ ಅವರು, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ, ಚನ್ನಪಟ್ಟಣದಲ್ಲಿ ‘ಸರ್ವಪಕ್ಷ ಸದಸ್ಯ’ ಸಿ.ಪಿ.ಯೋಗೇಶ್ವರ್ ಬೆಂಬಲಿತ ಅಭ್ಯರ್ಥಿಗಳು ಹೇಳಹೆಸರಿಲ್ಲದೇ ಸೋತಿದ್ದಾರೆ. 80% ಜೆಡಿಎಸ್ ಗೆದ್ದಿದೆ. ದಿನೇ ದಿನೇ ಚನ್ನಪಟ್ಟಣ ಕ್ಷೇತ್ರ ದೂರವಾಗುತ್ತಿರುವುದನ್ನು ನೋಡಲಾಗದೇ ಕ್ಷೇತ್ರ ಕಳೆದುಹೋಗಿರುವ ನೋವು ತಡೆಯಲಾಗದೇ ಯೋಗೇಶ್ವರ್ ಗೆ ಮತಿಭ್ರಮಣೆಯಾಗಿದೆ. ಅದಕ್ಕೇ ಉರಿ ಮಾತು ಎಂದು ಟೀಕೆ ಮಾಡಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ, ಚನ್ನಪಟ್ಟಣದಲ್ಲಿ 'ಸರ್ವಪಕ್ಷ ಸದಸ್ಯ' @CPYogeeshwara ಬೆಂಬಲಿತ ಅಭ್ಯರ್ಥಿಗಳು ಹೇಳಹೆಸರಿಲ್ಲದೇ ಸೋತಿದ್ದಾರೆ. 80% ಜೆಡಿಎಸ್ ಗೆದ್ದಿದೆ.ದಿನೇ ದಿನೇ ಚನ್ನಪಟ್ಟಣ ಕ್ಷೇತ್ರ ದೂರವಾಗುತ್ತಿರುವುದು ನೋಡಲಾಗದೇ ಕ್ಷೇತ್ರ ಕಳೆದುಹೋಗಿರುವ ನೋವು ತಡೆಯಲಾಗದೇ ಯೋಗೇಶ್ವರ್ ಗೆ ಮತಿ ಭ್ರಮಣೆಯಾಗಿದೆ.ಅದಕ್ಕೇ ಉರಿ ಮಾತು
— Sa Ra Mahesh (@SaRa_Mahesh_JDS) February 28, 2021
ಚನ್ನಪಟ್ಟಣದ ಚಕ್ಕೆರೆ ‘ಸರ್ವಪಕ್ಷ ಸದಸ್ಯ’ ಯೋಗೇಶ್ವರ್ ಹುಟ್ಟೂರು. ಯಾವುದೇ ನಾಯಕನಿಗೆ ಹುಟ್ಟೂರಿನಲ್ಲಾದರೂ ಮರ್ಯಾದೆ ಇರುತ್ತದೆ. ಆದರೆ, ಯೋಗೇಶ್ವರ್ ಗೆ ಹುಟ್ಟೂರಿನಲ್ಲೇ ನಾಲ್ಕಾಣೆ ಬೆಲೆ ಇಲ್ಲ. ಮೊನ್ನೆ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಇಡೀ ಚಕ್ಕರೆ ಗ್ರಾಮ ಪಂಚಾಯಿತಿ ಜೆಡಿಎಸ್ ಬೆಂಬಲಿಸಿದೆ. ಈ ನೋವು ಆವರನ್ನು ಕಾಡುತ್ತಿರಬಹುದು ಎಂದು ಸಾ.ರ.ಮಹೇಶ್ ಕೆಣಕಿದ್ದಾರೆ.
ಚನ್ನಪಟ್ಟಣದ ಚಕ್ಕೆರೆ 'ಸರ್ವಪಕ್ಷ ಸದಸ್ಯ' ಯೋಗೇಶ್ವರ್ ಹುಟ್ಟೂರು. ಯಾವುದೇ ನಾಯಕನಿಗೆ ಹುಟ್ಟೂರಿನಲ್ಲಾದರೂ ಮರ್ಯಾದೆ ಇರುತ್ತದೆ. ಆದರೆ, ಯೋಗೇಶ್ವರ್ ಗೆ ಹುಟ್ಟೂರಿನಲ್ಲೇ ನಾಲ್ಕಾಣೆ ಬೆಲೆ ಇಲ್ಲ. ಮೊನ್ನೆ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಇಡೀ ಚಕ್ಕರೆ ಗ್ರಾಮ ಪಂಚಾಯಿತಿ ಜೆಡಿಎಸ್ ಬೆಂಬಲಿಸಿದೆ. ಈ ನೋವು ಆವರನ್ನು ಕಾಡುತ್ತಿರಬಹುದು.
— Sa Ra Mahesh (@SaRa_Mahesh_JDS) February 28, 2021
ಹುಟ್ಟೂರಲ್ಲೇ ಗೆಲ್ಲದ ಯೋಗೇಶ್ವರ್ ಕ್ಷೇತ್ರ ಗೆಲ್ಲಲು ಸಾಧ್ಯವೇ? ಮುಂದಿನ ದಿನಗಳಲ್ಲಿ ಎಚ್ಡಿಕೆಯನ್ನು ಚನ್ನಪಟ್ಟಣದಿಂದ ಹೊರಹಾಕುತ್ತೇನೆ ಎಂಬ ಯೋಗೇಶ್ವರ್ ಮಾತು ವಾಸ್ತವವೇ?ಯೋಗೇಶ್ವರ್ ಲೀಲೆಗಳು ಅಲ್ಲಿನ ಜನರಿಗೆ ಮನದಟ್ಟಾಗಿವೆ. ಸಿ.ಡಿಯಿಂದಲೋ, ಫೋಟೊಗಳಿಂದಲೋ ಬಿಜೆಪಿ ಪರಿಷತ್ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ.ಅದನ್ನು ಅಚ್ಚುಕಟ್ಟಾಗಿ ಮಾಡಲಿ ಎಂದು ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.
ಹುಟ್ಟೂರಲ್ಲೇ ಗೆಲ್ಲದ ಯೋಗೇಶ್ವರ್ ಕ್ಷೇತ್ರ ಗೆಲ್ಲಲು ಸಾಧ್ಯವೇ? ಮುಂದಿನ ದಿನಗಳಲ್ಲಿ ಎಚ್ಡಿಕೆಯನ್ನು ಚನ್ನಪಟ್ಟಣದಿಂದ ಹೊರಹಾಕುತ್ತೇನೆ ಎಂಬ ಯೋಗೇಶ್ವರ್ ಮಾತು ವಾಸ್ತವವೇ?ಯೋಗೇಶ್ವರ್ ಲೀಲೆಗಳು ಅಲ್ಲಿನ ಜನರಿಗೆ ಮನದಟ್ಟಾಗಿವೆ. ಸಿ.ಡಿಯಿಂದಲೋ, ಫೋಟೊಗಳಿಂದಲೋ ಬಿಜೆಪಿ ಪರಿಷತ್ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ.ಅದನ್ನು ಅಚ್ಚುಕಟ್ಟಾಗಿ ಮಾಡಲಿ.
— Sa Ra Mahesh (@SaRa_Mahesh_JDS) February 28, 2021